ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ: ಕಾಳಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ!

ಹೊಸದಿಗಂತ ಕಾರವಾರ :

ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರವಾಹದ ಎಚ್ಚರಿಕೆ ಹೊರಡಿಸಿದೆ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೆದಿನೇ ಏರುತ್ತಿದೆ.ಜಲಾಶಯದ ಗರಿಷ್ಠ ಮಟ್ಟವು 1819 ಅಡಿಗಳಾಗಿದ್ದು ಜು. 27ರಂದು ಬೆಳಗ್ಗೆ ಜಲಾಶಯದ ನೀರಿನ ಮಟ್ಟ 1807 (75.51%) ಅಡಿಗಳಿಗೆ ತಲುಪಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವುಸುಮಾರು 74,600 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದರೆ, ಜಲಾಶಯವು ಅತೀ ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ.

ಆದ್ದರಿಂದ, ಅಣೆಕಟ್ಟೆಯ ಸುರಕ್ಷತೆದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು.ಆದ್ದರಿಂದ, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ. ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಹಾಗೂ ಪ್ರವಾಸಿಗರು ಅನಗತ್ಯವಾಗಿ ನದಿಗೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!