ಡೆಲ್ಲಿ-ಯುಪಿ ವಿರುದ್ಧದ ಪಂದ್ಯದ ವೇಳೆ ವರುಣನ ಆಗಮನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಳೆಯಿಂದ ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಯುಪಿ ವಾರಿಯರ್ಸ್​ ವಿರುದ್ಧದ ಪಂದ್ಯ ಸ್ಥಗಿತಗೊಂಡಿದೆ.

ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಡೆಲ್ಲಿ 9 ಓವರ್​ಗಳಲ್ಲಿ ಒಂದು ವಿಕೆಟ್​ ಕಳೆದುಕೊಂಡು 87 ರನ್​ ಗಳಿಸಿದ ವೇಳೆ ವರುಣನ ಆಗಮನವಾಗಿದ್ದು, ಕೆಲ ಕಾಲ ಸ್ಥಗಿತಗೊಳಿಸಲಾಯಿತು.

ಆದರೆ ಇದೀಗ ಮಳೆ ನಿಂತಿದ್ದು ಪಂದ್ಯ ನಡೆಯುತ್ತಿದೆ.
ಮುಂಬಯಿಯ ಡಾ. ಡಿ.ವೈ. ಪಾಟೀಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸುತ್ತಿರುವ ಡೆಲ್ಲಿ ತಂಡದ ನಾಯಕಿ ಮೆಗ್​ ಲ್ಯಾನಿಂಗ್(53*)​ ಸ್ಫೋಟಕ ಬ್ಯಾಟಿಂಗ್​ ಮೂಲಕ ಅರ್ಧಶತಕ ಸಿಡಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. ಸದ್ಯ ಅವರು 34 ಎಸೆತಗಳಿಂದ 7 ಬೌಂಡರಿ ಮತ್ತು 3 ಸಿಕ್ಸರ್​ ಬಾರಿಸಿದ್ದಾರೆ. ಇವರ ಜತೆಗಾರ್ತಿ ಮರಿಜಾನ್​ ಕಾಪ್​ 9 ರನ್​ ಗಳಿಸಿ ಬ್ಯಾಟಿಂಗ್​ ನಡೆಸುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!