ಭಾರತ-ಬಾಂಗ್ಲಾದೇಶ ಪಂದ್ಯಕ್ಕೆ ವರುಣನ ಎಂಟ್ರಿ: ಟೀಂ ಇಂಡಿಯಾಗೆ ಶುರುವಾಗಿದೆ ಆತಂಕ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಟೂರ್ನಿಯ ಭಾರತ ಹಾಗೂ ಬಾಂಗ್ಲಾದೇಶ ತಂಡ ನಡುವಿನ ಪಂದ್ಯಕ್ಕೆ ವರುಣನ ಎಂಟ್ರಿ ಆಗಿದ್ದು, ಪಂದ್ಯ ಅರ್ಧಕ್ಕೆ ನಿಂತಿದೆ.
ಭಾರತ ನೀಡಿದ್ದ 185 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡಕ್ಕೆ ಆರಂಭಿಕ ಬ್ಯಾಟರ್ ಲಿಟನ್ ದಾಸ್ ಸ್ಪೋಟಕ ಆರಂಭವನ್ನೇ ಒದಗಿಸಿಕೊಟ್ಟಿದ್ದಾರೆ ಸದ್ಯ ಲಿಟನ್ ದಾಸ್ ಕೇವಲ 26 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 59 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಇನ್ನು ಮತ್ತೊಂದು ತುದಿಯಲ್ಲಿ ನಜ್ಮುಲ್ ಹೊಸೈನ್ ಶಾಂಟೋ 16 ಎಸೆತಗಳನ್ನು ಎದುರಿಸಿ 7 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಟೀಂ ಇಂಡಿಯಾಗೆ ಆತಂಕ
ಸೆಮೀಸ್ ಪ್ರವೇಶಿಸುವ ದೃಷ್ಟಿಯಿಂದ ಟೀಂ ಇಂಡಿಯಾಗೆ ಈ ಪಂದ್ಯಸಾಕಷ್ಟು ಮಹತ್ವದ್ದೆನಿಸಿಕೊಂಡಿದೆ. ಆದರೆ ಇದೀಗ ಬಾಂಗ್ಲಾದೇಶ ತಂಡವು 7 ಓವರ್ ಮುಕ್ತಾಯದ ವೇಳೆಗೆ ವಿಕೆಟ್ ನಷ್ಟವಿಲ್ಲದೇ 66 ರನ್ ಬಾರಿಸಿದೆ. ಇದರ ಬೆನ್ನಲ್ಲೇ ಮಳೆ ಅಡ್ಡಿ ಪಡಿಸಿದೆ. ಒಂದು ವೇಳೆ ಮಳೆಯಿಂದ ಈ ಪಂದ್ಯ ಇಲ್ಲಿಗೆ ಸ್ಥಗಿತಗೊಂಡರೆ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಬಾಂಗ್ಲಾದೇಶ ತಂಡವು 17 ರನ್‌ಗಳ ಗೆಲುವು ದಾಖಲಿಸಿದೆ. ಹೀಗಾಗಿ ಟೀಂ ಇಂಡಿಯಾ ಪಾಳಯದಲ್ಲಿ ಆತಂಕ ಮನೆ ಮಾಡಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!