ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ವರುಣನ ಅಬ್ಬರ ಶುರುವಾಗಿದ್ದು, ಶುಕ್ರವಾರ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ.
ಮುಂದಿನ ದಿನಗಳಲ್ಲೂ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರ ಪ್ರಕ್ಷುಬ್ದಗೊಳ್ಳುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಭಾರಿ ಅಲೆಗಳು ತೀರಕ್ಕೆ ಅಪ್ಪಳಿಸುವ ಕಾರಣ ಪ್ರವಾಸಿಗರು ಮತ್ತು ಸ್ಥಳೀಯರಿಗೂ ಕೂಡ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದೆ.
ಜುಲೈ 22 ಮತ್ತು 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ತಿಳಿಸಿದೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗದಗ ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದ್ದು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಕೊಪ್ಪಳ, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.