ಕಾವೇರಿ ಕಣಿವೆಯಲ್ಲಿ ವರುಣನ ಅಬ್ಬರ: ಕನ್ನಂಬಾಡಿ ಅಣೆಕಟ್ಟೆಯಲ್ಲಿ 100 ಅಡಿ ತಲುಪಿದ ನೀರಿನ ಮಟ್ಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಕಾರಣ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟದ 100 ಅಡಿಗೆ ತಲುಪಿದ್ದು, ಕಟ್ಟೆಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚಳವಾಗುತ್ತಿದ್ದು, ಮೈದುಂಬಿ ಕಾವೇರಿ ಜಲಾಶಯಕ್ಕೆ ಜೀವ ಕಳೆ ತಂದಿದೆ.

ಮಂಗಳವಾರ ಬೆಳಿಗ್ಗೆ 48025 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದ ಗರಿಮಟ್ಟ 124.80 ಇದ್ದರೆ , ಜಲಾಶಯದಲ್ಲಿ ಸೋಮವಾರ ಸಂಜೆ 97.50 ಅಡಿಗೆ ನೀರಿನ ಮಟ್ಟ ಹೆಚ್ಚಳವಾಗಿತ್ತು, ಮಂಗಳವಾರದ ಬೆಳಗ್ಗೆ ಜಲಾಶಯದಲ್ಲಿ ನೀರು 100 ಅಡಿಗೆ ತಲುಪಿದ್ದು, ಒಂದೇ ದಿನದಲ್ಲಿ 4 ಅಡಿಗೂ ಹಚ್ಚಿನ ನೀಹು ಸಂಗ್ರಹವಾಗಿದೆ.

ಕೆ.ಆರ್.ಎಸ್. ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೂ ಹೆಚ್ಚಳವಾಗುತ್ತಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಹಾರಂಗಿ ಜಲಾಶಯವೂ ಭರ್ತಿಯಾಗಿದ್ದು, ಹೆಚ್ಚಿನ ಪ್ರಮಾಣದ ನೀರು ಹೊರ ಹರಿಯ ಬಿಡಲಾಗುತ್ತಿದೆ. ಹಾಗಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಹೇಮಾವತಿ ಜಲಾಶಯಕ್ಕೂ ಒಳ ಹರಿವು ಹೆಚ್ಚಾಗಿದೆ. ಅಲ್ಲಿಂದಲೋ ನೀರನ್ನು ಹೊರಕ್ಕೆ ಬಿಟ್ಟರೆ ಕೆ ಆರ್‌ಎಸ್ ಜಲಾಶಯಕ್ಕೆ ಮತ್ತಷ್ಟು ನೀರು ಹರಿದು ಬರಲಿದೆ.

ಮುಂಗಾರು ವೈಫಲ್ಯದಿಂದ ನೀರಿಲ್ಲದೆ ಸೊರಗಿದ್ದ ಜಲಾಶಯದಲ್ಲಿ ಕಾವೇರಿತಾಯಿ ಹರಿದುಬರುವ ಮೂಲಕ ಕೃಷ್ಣರಾಜಸಾಗರ ಜಲಾಶಯ ನಿಧಾನವಾಗಿ ಮೈದುಂಬಿ ಕೊಳ್ಳುತ್ತಿರುವುದು ರೈತರ ಮೊಗದಲ್ಲಿ ಹರ್ಷದ ಹೊನಲು ಹರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!