ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ವಿವಿದೆಡೆ ವರುಣನ ಅರ್ಭಟ ಜೋರಾಗಿದ್ದು ಉತ್ತರಖಂಡ, ಹಿಮಾಚಲ ಪ್ರದೇಶ ಬಳಿಕ ಇದೀಗ ಮಣಿಪುರವನ್ನೂ ಮಳೆರಾಯ ಎಂಟ್ರಿ ಕೊಟ್ಟಿದ್ದು, ರಾಜ್ಯದಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ಅಡ್ಡಿಪಡಿಸಿದೆ.
ಅಧಿಕ ಮಳೆಯಿಂದಾಗಿ ಮಣಿಪುರದ ನೋನಿ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಉಂಟಾಗಿದೆ.ಹೀಗಾಗಿ ಇಂಫಾಲ್-ಸಿಲ್ಚಾರ್ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಇದರಿಂದಾಗಿ ಕನಿಷ್ಠ 500 ಸರಕು ವಾಹನಗಳು ಸಿಲುಕಿಕೊಂಡಿವೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಇರಾಂಗ್ ಮತ್ತು ಅವಾಂಗ್ಖುಲ್ ಭಾಗ 2, ಖೋಂಗ್ಸಾಂಗ್ ಮತ್ತು ಅವಾಂಗ್ಖುಲ್ ಮತ್ತು ರಂಗ್ಖುಯಿ ಗ್ರಾಮದ ನಡುವಿನ ರಾಷ್ಟ್ರೀಯ ಹೆದ್ದಾರಿ 37 ರಲ್ಲಿ ಬುಧವಾರ ಭೂಕುಸಿತ ಸಂಭವಿಸಿದೆ. ರಸ್ತೆಯನ್ನು ತೆರವುಗೊಳಿಸಿ, ಸಂಚಾರವನ್ನು ಪುನರಾರಂಭಿಸುವ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಭೂಕುಸಿತಕ್ಕೆ ಕಾರಣವಾಗಿದೆ.