ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮುಂದಿನ ಮೂರು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ಮೂರು ದಿನಗಳ ಕಾಲ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ ಉತ್ತರಾಖಂಡದಲ್ಲಿ ಸೆ.12ರಿಂದ 24ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯೂ ಆಗಬಹುದು. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. .