ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ: ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ರಜೆ ಘೋಷಿಸಲಾಗಿದೆ.

ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಸೂಚಿಸಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!