ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳು ಮತ್ತು ಪಿಯು ಕಾಲೇಜುಗಳಿಗೆ ನಾಳೆಯೂ (ಜೂ. 28, ಶುಕ್ರವಾರ ) ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಕಾರಣ ಜೂ. 27 ರಂದು ರಜೆ ನೀಡಲಾಗಿತ್ತು. ಇದೀಗ ಜೂ. 28ರಂದು ಕೂಡ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.