ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯ ವಸಂತ ವಿಹಾರ್ ಪ್ರದೇಶದ ಬ್ಲಾಕ್ ಸಿ ಮಾರ್ಕೆಟ್‌ನಲ್ಲಿರುವ ಅಂಗಡಿಯಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ.
ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್‌ಗಳೊಂದಿಗೆ ಆಗಮಿಸಿ ಬೆಂಕಿ ನಂದಿಸಿದರು.
ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಪಂದಿಸಿ ಬೆಂಕಿಯನ್ನು ಹತೋಟಿಗೆ ತಂದರು. ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ ಮತ್ತು ಬೆಂಕಿಯ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಅಗ್ನಿಶಾಮಕ ನಿರ್ದೇಶಕ ಅತುಲ್ ಗಾರ್ಗ್ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.