ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಸಿಷ್ಠ- ಹರಿಪ್ರಿಯಾ ಜೋಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸ್ಯಾಂಡಲ್‌ವುಡ್‌ನ (Sandalwood) ಜೋಡಿ ವಸಿಷ್ಠ ಸಿಂಹ (Vasista Simha) ಮತ್ತು ಹರಿಪ್ರಿಯಾ (Haripriya) ಇಂದು (ಜ.26)ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಈ ಜೋಡಿ ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ನಟ ವಸಿಷ್ಠ ಸಿಂಹ- ಹರಿಪ್ರಿಯಾ ಹಲವು ವರ್ಷಗಳ ಪ್ರೀತಿಯಿಸುತ್ತಿದ್ದು, ಇಂದುಮದುವೆ ಎಂಬ ಮುದ್ರೆ ಒತ್ತಿದ್ದಾರೆ.

ಮೈಸೂರಿನಲ್ಲಿ ಸರಳವಾಗಿ ವಿವಾಹವಾಗಿರುವ ಈ ಜೋಡಿ, (ಜ.28)ರಂದು ಸಿನಿಮಾರಂಗದ ಸ್ನೇಹಿತರಿಗೆ ಮತ್ತು ಗಣ್ಯರಿಗೆ ಬೆಂಗಳೂರಿನಲ್ಲಿ ಆರತಕ್ಷತೆ ಹಮ್ಮಿಕೊಂಡಿದ್ದಾರೆ. ಚಿತ್ರರಂಗದ ಈ ನವಜೋಡಿಗೆ ಅಭಿಮಾನಿಗಳು, ಸೆಲೆಬ್ರಿಟಿ ಸ್ನೇಹಿತರು ಶುಭಹಾರೈಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!