ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಜಗತ್ತಿಗೆ ಸಹಾಯ ಮಾಡಲು ಭಾರತ ತನ್ನ ಕೈಲಾದಷ್ಟು ಪ್ರಯತ್ನ ಮಾಡಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ತಿರುಪತಿ ಬಾಲಾಜಿಯ ದರ್ಶನ ಪಡೆದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಂಕ್ರಾಮಿಕ ಅವಧಿಯಲ್ಲಿ ಭಾರತವು ಯಾರನ್ನೂ ಅವಲಂಬಿಸಿರಲಿಲ್ಲ. ಬದಲಿಗೆ ವೈರಸ್ ವಿರುದ್ಧದ ಯುದ್ಧದಲ್ಲಿ ಜಗತ್ತಿಗೆ ಬೆಂಬಲವನ್ನು ನೀಡಿತು ಎಂದು ಗೋಯಲ್ ಹೇಳಿದ್ದಾರೆ.
‘ವಸುದೈವ ಕುಟುಂಬಕಂ’ (ಜಗತ್ತನ್ನು ಒಂದು ಕುಟುಂಬವೆಂದು ಪರಿಗಣಿಸುವ) ನಿಜವಾದ ಮನೋಭಾವದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು 150ಕ್ಕೂ ಹೆಚ್ಚು ದೇಶಗಳಿಗೆ ಔಷಧಿಗಳ ಪೂರೈಕೆಗೆ ಬೆಂಬಲ ನೀಡಿದ್ದಾರೆ ಮತ್ತು ಭಾರತದಿಂದ 75ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಕೋವಿಡ್-19 ಲಸಿಕೆ ಪೂರೈಕೆಯಾಗಿದೆ ಎಂದು ಗೋಯಲ್ ತಿಳಿಸಿದರು.
ಕೊರೋನಾ ಇನ್ನೂ ಕೊನೆಗೊಂಡಿಲ್ಲ. ನಾವು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಮತ್ತು ಎಲ್ಲಾ ಸಮಯದಲ್ಲೂ ಮಾಸ್ಕ್ ಧರಿಸುವುದು ಸೇರಿದಂತೆ ಪ್ರೋಟೋಕಾಲ್ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಾಗರೂಕರಾಗಿರಬೇಕು ಮತ್ತು ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.