ನಾಳೆ ರಾಜಭವನಕ್ಕೆ ವಾಟಾಳ್ ನಾಗರಾಜ್ ಟೀಮ್ ಮುತ್ತಿಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯಗೊಳಿಸಿ, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರ ಅಂಕಿತಕ್ಕೂ ಕಳುಹಿಸಲಾಗಿತ್ತು. ಆದ್ರೇ ಇದನ್ನು ವಾಪಾಸ್ ಕಳುಹಿಸಿದ್ದರು. ರಾಜ್ಯಪಾಲರ ಇಂತಹ ನಡೆಯನ್ನು ಖಂಡಿಸಿ, ನಾಳೆ ರಾಜಭವನಕ್ಕೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ , ಕನ್ನಡ ನಾಮಫಲಕ, ಶಾಸನ ಸಭೆಯಲ್ಲಿ ಮಸೂದೆ ಆಗಲೇಬೇಕು. ಮಸೂದೆಗೆ ರಾಜ್ಯಪಾಲರ ಅಂಗೀಕಾರ ನೀಡಬೇಕೆಂದು ಒತ್ತಾಯಿಸಿ ಫೆ.07 ರ ನಾಳೆ ಮಧ್ಯಾಹ್ನ 12 ಗಂಟೆಗೆ ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಾವು ರಾಜಭವನಕ್ಕೆ ಮುತ್ತಿಗೆ ಹಾಕುತ್ತಿರೋದರ ಹಿನ್ನಲೆ ನಾಮಫಲಕ ಕನ್ನಡದ ದೊಡ್ಡ ಅಕ್ಷರಗಳಲ್ಲಿ ಕಡ್ಡಾಯ ಮಾಡೋ ಮಸೂದೆಗೆ ಅಂಕಿತ ಹಾಕಬೇಕು ಎಂಬುದಾಗಿದೆ. ಶಾಲಾ-ಕಾಲೇಜುಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಕಲಿಯಲೇಬೇಕು. ರೈಲ್ವೆ, ಬ್ಯಾಂಕ್ ನಲ್ಲಿ ಕನ್ನಡ ಕಡ್ಡಾಯವಾಗಬೇಕು. ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!