ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಂದಿಗ್ಧ ಪರಿಸ್ಥಿತಿಯಲ್ಲಿ ಸಮಾಧಾನಪಡಿಸಿದ ಬಿಸಿಸಿಐಗೆ ಕೃತಜ್ಞತೆ ಸಲ್ಲಿಸಿದ ವೇದಾ ಕೃಷ್ಣಮೂರ್ತಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾದಿಂದಾಗಿ ಎರಡು ವಾರಗಳಲ್ಲಿ ತಾಯಿ ಮತ್ತು ಸಹೋದರಿಯನ್ನು ಕಳೆದುಕೊಂಡ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರು ವಿಷಾದದ ಸಂದರ್ಭದಲ್ಲಿ ಸಮಾಧಾನಪಡಿಸಿದ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ವೇದಾ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, ಸಂದಿಗ್ಧ ಪರಿಸ್ಥಿತಿಯಲ್ಲಿ ಬಿಸಿಸಿಐ ತೋರಿದ ಕಾಳಜಿಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮಂಡಳಿಯ ಕಾರ್ಯದರ್ಶಿ ಜಯ ಶಾ ಅವರಿಗೂ ಅಭಾರಿ ಎಂದು ತಿಳಿಸಿದ್ದಾರೆ.
ವೇದಾ ದು:ಖದ ಮಡುವಿನಲ್ಲಿದ್ದಾಗ ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಮಹಿಳಾ ತಂಡವನ್ನು ಆಯ್ಕೆ ಮಾಡಲಾಗಿತ್ತು. ಆದರೆ ವೇದಾ ಅವರನ್ನು ಕೈಬಿಡಲಾಗಿತ್ತು. ಆದರೆ ಇದಕ್ಕೂ ಮುನ್ನ ಸೌಜನ್ಯಕ್ಕಾದರೂ ಅವರ ಅಭಿಪ್ರಾಯ ತಿಳಿಯಲು ಬಿಸಿಸಿಐ ಮುಂದಾಗಲಿಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕಿ ಲಿಸಾ ಸ್ಥಳೇಕರ್ ದೂರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss