ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಕೇಶವಪ್ರಸಾದ್, ರಾಜ್ಯ ಖಜಾಂಚಿ ಸುಬ್ಬಣ್ಣ ಮತ್ತು ಕಾರ್ಯಾಲಯ ಸಿಬ್ಬಂದಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.