ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ರಣ್‌ದೀಪ್ ಹೂಡಾ ನಟಿಸಿ ನಿರ್ದೇಶಿಸಿರುವ ಸ್ವಾತಂತ್ರ್ಯ ವೀರ್ ಸಾವರ್ಕರ್ ಸಿನಿಮಾವೂ ಅಧಿಕೃತವಾಗಿ 2025ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.
ಈ ಜೀವನಚರಿತ್ರೆಯಾಧಾರಿತ ಸಿನಿಮಾವೂ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದ್ದು, ಈ ಸಿನಿಮಾದಲ್ಲಿ ರಣ್‌ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ ನಟಿಸಿದ್ದಾರೆ.
ಸಂದೀಪ್ ಸಿಂಗ್ ಅವರು ಈ ಸಿನಿಮಾದ ನಿರ್ಮಾಣ ಮಾಡಿದ್ದು, ಈ ಸಿನಿಮಾವೀಗ ಆಸ್ಕರ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ಖುಷಿಯ ವಿಚಾರವನ್ನು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ ಸಂತಸದ ಜೊತೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
‘ಗೌರವ ಹಾಗೂ ವಿನಮ್ರತೆ,’ ನಮ್ಮ ಸಿನಿಮಾ ಸ್ವಾತಂತ್ರವೀರ ಸಾವರ್ಕರ್ ಅಧಿಕೃತವಾಗಿ ಆಸ್ಕರ್‌ಗೆ ಆಯ್ಕೆಯಾಗಿದೆ. ಈ ಮಹತ್ವಪೂರ್ಣವಾದ ಗುರುತಿಸುವಿಕೆಗೆ ಫಿಲಂ ಫೆಡರೇಷನ್ ಆಫ್ ಇಂಡಿಯಾಗೆ ಧನ್ಯವಾದಗಳು , ಈ ಪ್ರಯಾಣವನ್ನು ನಂಬಲಾಗುತ್ತಿಲ್ಲ, ಈ ಸಂದರ್ಭದಲ್ಲಿ ನಮ್ಮ ಈ ಹಾದಿಯಲಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ಎಂದಿದ್ದಾರೆ.