ವೀರಾಜಪೇಟೆ ಸುತ್ತಮುತ್ತ ಮದ್ಯ ಮಾರಾಟ ನಿಷೇಧ

ಹೊಸ ದಿಗಂತ ವರದಿ, ಮಡಿಕೇರಿ:

ವೀರಾಜಪೇಟೆಯಲ್ಲಿ ಮೇ 19 ರಂದು ಹಿಂದೂ ಜನ ಜಾಗೃತಿ ಸಮಾವೇಶ ಹಾಗೂ ಶೋಭಾಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಅದರಂತೆ‌ ಮೇ 18 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 19 ರ ಮಧ್ಯರಾತ್ರಿ 12 ಗಂಟೆಯವರೆಗೆ ವೀರಾಜಪೇಟೆ ನಗರದ 10 ಕಿ.ಮೀ. ಸುತ್ತಮುತ್ತ ಹಾಗೂ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಂಗ ಮತ್ತು ಅಮ್ಮತ್ತಿ ಪಟ್ಟಣ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!