October 27, 2026
Tuesday, October 27, 2026
spot_img

ವೀರಮಣಿ ರಾಜು ಅವರ ಭಕ್ತಿ ಸಂಗೀತ ಕಾರ್ಯಕ್ರಮ ಮುಂದೂಡಿಕೆ: ನ. 24ರಂದು ಕದ್ರಿ ದೇವಸ್ಥಾನದಲ್ಲಿ ಆಯೋಜನೆ

ಹೊಸದಿಗಂತ ವರದಿ ಮಂಗಳೂರು:

ಚೆನ್ನೈನ ಪ್ರಸಿದ್ಧ ಅಯ್ಯಪ್ಪ ಭಕ್ತಿಗೀತೆ ಗಾಯಕ ವೀರಮಣಿ ರಾಜು ಅವರ ಭಕ್ತಿ ಸಂಗೀತ ಕಾರ್ಯಕ್ರಮದ ದಿನಾಂಕವನ್ನು ಬದಲಾಯಿಸಲಾಗಿದೆ. ಅಕ್ಟೋಬರ್ 29ರ ಗುರುವಾರ ಮಂಗಳೂರು ಪುರಭವನದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ಇದೀಗ ನವೆಂಬರ್ 24ರ ಮಂಗಳವಾರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಠಾರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಪ್ರಕಟಣೆ ಹೊರಡಿಸಿದೆ. ಕಾರ್ಯಕ್ರಮದ ದಿನಾಂಕ ಮತ್ತು ಸ್ಥಳದಲ್ಲಿ ಬದಲಾವಣೆಯಾಗಿರುವುದರಿಂದ ಭಕ್ತರಿಗೆ ಉಂಟಾಗಿರುವ ಅನಾನುಕೂಲಕ್ಕಾಗಿ ಸಂಘಟಕರು ಕ್ಷಮೆಯಾಚಿಸಿದ್ದಾರೆ.

ನೂತನ ದಿನಾಂಕದಂದು ಕದ್ರಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಭಕ್ತಿ ಸಂಗೀತ ಕಾರ್ಯಕ್ರಮಕ್ಕೆ ಭಕ್ತರು ಸಹಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಅಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.

Must Read