ಹೊಸದಿಗಂತ ವರದಿ,ಬಳ್ಳಾರಿ:
ಅಖಿಲ ಭಾರತ ವೀರಶೈವ ಮಹಾಸಭಾ ಆಶ್ರಯದಲ್ಲಿ ಹಾನಗಲ್ ಕುಮಾರಸ್ವಾಮಿಗಳ 156ನೇ ಜಯಂತ್ತ್ಯುತ್ಸವ ಮತ್ತು ವೀರಶೈವ ಲಿಂಗಾಯತ ಜನ ಜಾಗೃತಿ ಸಮಾವೇಶ ಹಿನ್ನೆಲೆ ಹಮ್ಮಿಕೊಂಡಿದ್ದ ಬೃಹತ್ ಮೆರವಣಿಗೆಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಭಾನುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ, ಜಿಲ್ಲಾಧ್ಯಕ್ಷ ಚಾನಾಳ್ ಶೇಖರ್, ನಗರ ಘಟಕದ ಅಧ್ಯಕ್ಷ ಅಭಿಲಾಷ್ ಕೆ.ಎನ್.ಎಂ., ಯುವ ಘಟಕದ ರಾಜ್ಯ ಕಾರ್ಯದರ್ಶಿ ಶಂಕರ್ ಅಂಗಡಿ, ಜಿ.ಪಂ.ಮಾಜಿ ಸದಸ್ಯ ಅಲ್ಲಂ ಪ್ರಶಾಂತ್, ಕಲ್ಯಾಣ ಶ್ರೀಮಠದ ಕಲ್ಯಾಣ ಸ್ವಾಮೀಜಿ, ಸಚಿವರ ಸಹೋದರ ವೆಂಕಟೇಶ ಪ್ರಸಾದ್ ಸೇರಿದಂತೆ ಸಮುದಾಯದ ವಿವಿಧ ಮುಖಂಡರು ಉಪಸ್ಥಿತರಿದ್ದರು.