ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಬೇಡಿಕೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಮತ್ತೊಮ್ಮೆ ರೈತರು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತರ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿವೆ.
ಈ ಪ್ರತಿಭಟನೆಗಳು ಆಹಾರ ಪೂರೈಕೆ ಸರಪಳಿಯ ಮೇಲೆ ಪರಿಣಾಮ ಬೀರಬಹುದು ಮತ್ತು ದಿಲ್ಲಿಯಲ್ಲಿ ತರಕಾರಿ ಬೆಲೆ ಏರಿಕೆಗೆ ಕಾರಣವಾಗಬಹುದು ಎಂದು ವ್ಯಾಪಾರಿಗಳು ಹೇಳಿದ್ದಾರೆ.
ಪಂಜಾಬ್‌ನಿಂದ ಸಾಕಷ್ಟು ಪೂರೈಕೆಯಾಗದ ಕಾರಣ 15 ದಿನಗಳ ನಂತರ ಪ್ರತಿ ಕ್ಯಾರೆಟ್ ಬೆಲೆ 4 ರೂ. ಏರಿಕೆಯಾಗಿದೆ ಎಂದು ವ್ಯಾಪಾರಿಯೊಬ್ಬರು ಹೇಳಿದರು.
ಪ್ರತಿಭಟನೆ ಮುಂದುವರಿದರೆ ಮತ್ತಷ್ಟು ವ್ಯತ್ಯಯ ಉಂಟಾಗಿ ಇತರೆ ತರಕಾರಿಗಳ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.