ಮದ್ಯ ಸಾಗಿಸುತ್ತಿದ್ದ ವಾಹನ ಪಲ್ಟಿ: ಬಾಟಲಿ ಎತ್ತಿಕೊಳ್ಳಲು ಮುಗಿಬಿದ್ದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಮದ್ಯ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ತಮಿಳುನಾಡಿನ ಮದುರೈನ ವಿರಾಗನೂರು ಪ್ರದೇಶದ ಬಳಿ ನಡೆದಿದೆ. ಈ ವಾಹನವು ಕೇರಳದ ಮಣಲೂರಿನಲ್ಲಿರುವ ಗೋದಾಮಿನಿಂದ ಮದ್ಯದ ಬಾಟಲಿಗಳನ್ನು ತುಂಬಿಕೊಂಡು ಸಾಗುತ್ತಿತ್ತು ಎನ್ನಲಾಗಿದೆ.

ಉರುಳಿಬಿದ್ದ ರಭಸಕ್ಕೆ ವಾಹನದಲ್ಲಿದ್ದ ಸುಮಾರು 10 ಲಕ್ಷ ಮೌಲ್ಯದ ಮದ್ಯದ ಬಾಟಲಿಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ತಕ್ಷಣವೆ ಸ್ಥಳಕ್ಕೆ ಓಡಿದ ಬಂದ ಸುತ್ತಮುತ್ತಲಿನ ಜನರು ಕೈಗೆ ಸಿಕ್ಕಷ್ಟು ಮದ್ಯದ ಬಾಟಲಿಗಳನ್ನು ಎತ್ತಿಕೊಂಡು ಓಡಿ ಹೋಗುತ್ತಿರುವ ಚಿತ್ರಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!