ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ವಿದ್ಯುತ್‌ ಸ್ಪರ್ಶ: 10 ಕನ್ವಾರಿಯಾಗಳ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಕನ್ವರ್‌ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ವಿದ್ಯುತ್‌ ಸ್ಪರ್ಶವಾಗಿದ್ದು ವಾಹನದಲ್ಲಿದ್ದ ಸುಮಾರು 10ಜನ ಕನ್ವರ್‌ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು 19ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಭಾನುವಾರ ತಡರಾತ್ರಿ ಘಟನೆ ನಡೆದಿದ್ದು ಜಲ್ಪೇಶ್‌ಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ಟ್ರಕ್ ವಿದ್ಯುತ್ ಸ್ಪರ್ಶಕ್ಕೆ ತುತ್ತಾಗಿದೆ.

ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, 16 ಜನರನ್ನು ಚಿಕಿತ್ಸೆಗಾಗಿ ಜಲ್ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ವಾಹನದಲ್ಲಿದ್ದ ಡಿಜೆ ಸಿಸ್ಟಂನ ಜನರೇಟರ್‌ನ ವೈರಿಂಗ್‌ನಿಂದ ಈ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದೆ. ಎಲ್ಲಾ ಪ್ರಯಾಣಿಕರು ಸಿತಾಲ್ಕುಚಿ ಪೊಲೀಸ್ ಠಾಣೆಗೆ ಸೇರಿದವರಾಗಿದ್ದು, ದುರಂತ ಘಟನೆಯ ಬಗ್ಗೆ ಅವರ ಕುಟುಂಬಗಳಿಗೆ ಮಾಹಿತಿ ರವಾನಿಸಲಾಗಿದೆ. ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಆದರೆ ಚಾಲಕ ಪರಾರಿಯಾಗಿದ್ದಾನೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಪೊಲೀಸರು ಪರಿಹಾರ ಮತ್ತು ಅಗತ್ಯವಿರುವ ಸಹಾಯ ಕಾರ್ಯದಲ್ಲಿ ನಿರತರಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮೂಲಗಳೂ ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!