ಜಮ್ಮು ಮತ್ತು ಕಾಶ್ಮೀರದಲ್ಲಿ ಆಳವಾದ ಕಂದಕಕ್ಕೆ ಉರುಳಿದ ವಾಹನ: 7 ಮಂದಿ ಸಾವು, ಓರ್ವನಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, ಓರ್ವನಿಗೆ ಗಾಯಗಳಾಗಿವೆ.

ಪಾಕಲ್ ದುಲ್ ಪ್ರಾಜೆಕ್ಟ್‌ನ ಕ್ರೂಸರ್ ವಾಹನವು ದಂಗದೂರು ಪವರ್ ಪ್ರಾಜೆಕ್ಟ್‌ನ 10 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ದಂಗದೂರು ಅಣೆಕಟ್ಟಿನ ಸಮೀಪ ಅಪಘಾತ ಸಂಭವಿಸಿದೆ.

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ, ಓರ್ವ ಗಂಭೀರ ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಗಾಯಾಳುಗಳನ್ನು ಕಿಶ್ತ್ವಾ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಕಿಶ್ತ್ವಾರ್ ಉಪ ಆಯುಕ್ತ ಡಾ.ದೇವಾಂಶ್ ಯಾದವ್ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!