ಕಣಿವೆಗೆ ಉರುಳಿದ ಬಸ್‌: 11 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಹಾರ ಯಾತ್ರೆಗೆ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದ ವಾಹನವೊಂದು ಕಣಿವೆಗೆ ಉರುಳುಬಿದ್ದು 11ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಾಯುವ್ಯ ಪಾಕಿಸ್ತಾನದ ಪರ್ವತ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು,ಅವರ ಪರಿಸ್ಥಿತಿಯೂ ಗಂಭೀರವಾಗಿದೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಸ್ವಾತ್ ಕಣಿವೆಯ ಗಬಿನ್ ಜಬ್ಬಾ ಬಳಿಯ ಲಾಲ್ಕೊ ಕಣಿವೆಯಲ್ಲಿ ಪ್ರವಾಸಿಗರನ್ನು ಸಾಗಿಸುತ್ತಿದ್ದ ವಾಹನವೊಂದು ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಮೆಹಮೂದ್ ಖಾನ್ ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಸ್ವಾತ್ ಕಣಿವೆಯು ಪ್ರವಾಸಿಗರನ್ನು ಆಕರ್ಷಿಸುವ ಸುಂದರ ಸ್ಥಳವಾಗಿದೆ. ಅಲ್ಲಿ ಜಲಪಾತಗಳು ಮತ್ತು ವಿವಿಧ ಆಕಾರಗಳಲ್ಲಿರುವ ಗ್ರಾನೈಟ್ ಶಿಖರಗಳು ಪ್ರವಾಸಿಗರನ್ನು ಮತ್ತು ಸಾಹಸ ಪ್ರಿಯರನ್ನು ಆಕರ್ಷಿಸುತ್ತವೆ. ಆದರೆ, ಅಪಘಾತ ನಡೆದ ಪ್ರದೇಶದಲ್ಲಿ ಸೂಕ್ತ ರಸ್ತೆ ಸೌಕರ್ಯ ಇಲ್ಲದ ಕಾರಣ ವಾಹನ ಕಣಿವೆಗೆ ಬಿದ್ದಿದೆ ಎಂಬುದು ಸ್ಥಳೀಯರ ಆರೋಪ. ಕಳೆದ ಹತ್ತು ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿ ಸುರಿದ ಭಾರೀ ಮಳೆಗೆ ಪ್ರಯಾಣಿಕರ ಬಸ್ಸೊಂದು ಪರ್ವತ ರಸ್ತೆಯಿಂದ ಜಾರಿ ಕಣಿವೆಗೆ ಬಿದ್ದಿತ್ತು. ಈ ಘಟನೆಯಲ್ಲಿ 19 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!