Monday, August 15, 2022

Latest Posts

ಕೇರಳಕ್ಕೆ ಸಾಗಿಸುತ್ತಿದ್ದ 1.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ತರಕಾರಿ ಗೂಡ್ಸ್  ವಾಹನದಲ್ಲಿ ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಗೋಣಿಕಕೊಪ್ಪ ಪೊಲೀಸರು 1.20ಲಕ್ಷ ರೂ.ಮೌಲ್ಯದ ಮಾಲು ವಶಪಡಿಸಿಕೊಂಡಿದ್ದಾರೆ.
ಹುಣಸೂರಿನಿಂದ ಕೇರಳಕ್ಕೆ ಪ್ರತಿನಿತ್ಯ ತರಕಾರಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಆನೆಚೌಕೂರು ಗೇಟ್ ನಲ್ಲಿ ಸೋಮವಾರ ತಪಾಸಣೆ ಮಾಡಿದಾಗ ಅದರಲ್ಲಿ ಓಲ್ಡ್ ಅಡ್ಮಿರಲ್ ಮತ್ತು ಬಿಜಾಯ್ಸ್ ಮದ್ಯ ಸಾಗಿಸುತ್ತಿದ್ದುದು ಪತ್ತೆಯಾಗಿದೆ.
ವೀರಾಜಪೇಟೆ ಡಿವೈಎಸ್ ಪಿ ಜಯಕುಮಾರ್ ನಿರ್ದೇಶನದ ಮೇರೆ ಗೋಣಿಕೊಪ್ಪಲು ಪೊಲೀಸ್ ವೃತ್ತ ನಿರೀಕ್ಷಕ  ಎಸ್.ಎನ್.ಜಯರಾಮ್ ಹಾಗೂ ಪೊಲೀಸ್ ಉಪ ನಿರೀಕ್ಷಕ ಹೆಚ್.ಸುಬ್ಬಯ್ಯ ಮತ್ತು‌ ಸಿಬ್ಬಂದಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ವಾಹನ ಸಹಿತ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss