Wednesday, August 17, 2022

Latest Posts

ಶಂಕರಮಠ ರಸ್ತೆಯಲ್ಲಿನ ಮೇಲು ಸೇತುವೆಯಲ್ಲಿ ವಾಹನಗಳ ಓಡಾಟಕ್ಕೆ ತಡೆ

ಹೊಸದಿಗಂತ ವರದಿ, ಶಿವಮೊಗ್ಗ:

ನಗರದ ಶಂಕರಮಠ ರಸ್ತೆಯಲ್ಲಿನ ಮೇಲು ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ಸೋಮವಾರದಿಂದ ತಡೆ ಹಾಕಲಾಗಿದೆ. ಸುಮಾರು ಒಂದು ತಿಂಗಳ ಕಾಲ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ.
ಇಲ್ಲಿ ನಿರ್ಮಿಸಿದ್ದ ಮೇಲು ಸೇತುವೆ ರಸ್ತೆಯಲ್ಲಿ ಅಲ್ಲಲ್ಲಿ ಕಬ್ಬಿಣದ ರಾಡುಗಳು ಹೊರ ಬಂದಿದ್ದವು. ಇದು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿತ್ತು. ಇದನ್ನು ಮನಗಂಡು ಲೋಕೋಪಯೋಗಿ ಇಲಾಖೆಯಿಂದ ದುರಸ್ಥಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ರಾಡುಗಳು ಹೊರಬಂದಿರುವ ಕಡೆ ಕಾಂಕ್ರೀಟ್ ಹಾಕಲಾಗುತ್ತಿದೆ. ಹಾಗಾಗಿ ವಾಹನ ಸಂಚಾರಕ್ಕೆ ತಡೆ ಬಿದ್ದಿದೆ.
ಶಂಕರಮಠ ರಸ್ತೆಯಿಂದ ಹೊನ್ನಾಳಿ ರಸ್ತೆಗೆ ತೆರಳುವಲ್ಲಿ ಮೇಲು ಸೇತುವೆ ಮೇಲೆ ಕೇವಲ ದ್ವಿಚಕ್ರ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೊನ್ನಾಳಿ ಕಡೆಯಿಂದ ಬರುವ ವಾಹನಗಳಿಗೆ ಮಾತ್ರ ಸೇತುವೆ ಮೇಲೆ ಬಿಡಲಾಗುತ್ತಿದೆ. ಶಿವಮೊಗ್ಗ ಕಡೆಯಿಂದ ಹೊನ್ನಾಳಿ, ರಾಗಿಗುಡ್ಡ ಕಡೆ ತೆರಳುವವರು ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜು ಬಳಿಯಿಂದ ಪರ್ಯಾಯ ಮಾರ್ಗದಲ್ಲಿ ತೆರಳಬಹುದಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!