August 27, 2026
Thursday, August 27, 2026
spot_img

ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನ ಮುಲಾಜಿಲ್ಲದೇ ಮುಟ್ಟುಗೋಲು ಹಾಕಿ: ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅನುಮತಿ ಇಲ್ಲದೇ ಕಸ ಸುರಿಯುವವರ ವಾಹನವನ್ನು ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳಿ ಎಂದು ಸಿಎಂ ಡಿ.ಕೆ ಶಿವಕುಮಾರ್‌ ನಗರದ ಪೊಲೀಸರಿಗೆ ನಿರ್ದೇಶನ ನೀಡಿದರು.

ಹೆಬ್ಬಾಳ ಜಂಕ್ಷನ್‌ ಬಳಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿ, ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಬೆಂಗಳೂರು ನಿಮ್ಮ ಆಸ್ತಿ. ಇದನ್ನು ಕಾಪಾಡಲು ಅಭಿಯಾನ ಆರಂಭಿಸಿದ್ದೇವೆ. ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿಯುವ ವಾಹನಗಳಿಗೆ ನೋಟೀಸ್ ಕೊಡಲಾಗಿತ್ತು. ಕ್ಯಾಮೆರಾ ಕಣ್ಗಾವಲು ಇಡಲಾಗಿತ್ತು. ಈಗ ಮತ್ತೆ ಯತಾಸ್ಥಿತಿಯಲ್ಲಿ ಕಸ ಸುರಿಯುತ್ತಿದ್ದಾರೆ. ಜನರಲ್ಲಿ ನಾವು ನಾಗರಿಕ ಪ್ರಜ್ಞೆ ತರಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಹಸಿರಿನ ವಿಚಾರವಾಗಿ ನನ್ನಲ್ಲಿ ವಿಭಿನ್ನ ಆಲೋಚನೆ ಇದೆ. ಅದನ್ನು ಈಗ ನಾನು ಪ್ರಸ್ತಾಪ ಮಾಡುವುದಿಲ್ಲ, 100 ದಿನಗಳ ಕಾರ್ಯಕ್ರಮದ ವೇಳೆ ಪ್ರಕಟ ಮಾಡುತ್ತೇವೆ. ಬೆಂಗಳೂರು ಸ್ವಚ್ಛತೆ ಬಗ್ಗೆ ಟೀಕೆ ಟಿಪ್ಪಣಿ ಬರುತ್ತಿವೆ. ನಾವು ಮಾಡುವ ಕೆಲಸ ಶಾಶ್ವತವಾಗಿ ಉಳಿಯುತ್ತದೆ, ಟೀಕೆಗಳು ಸಾಯುತ್ತವೆ. ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ದಾಳಿ ಮಾಡಲಾಗಿದೆ. ಯಾರಾದರೂ ಇದನ್ನು ಅಧಿಕಾರಿಗಳ ಮೇಲೆ ದಾಳಿ ಎಂದು ಭಾವಿಸಿದ್ದರೆ ಅದು ಭ್ರಮೆ. ಇದು ಸರ್ಕಾರ, ಸಚಿವರು ಹಾಗೂ ಶಾಸಕರ ಮೇಲಿನ ದಾಳಿ ಎಂದೇ ಭಾವಿಸುತ್ತೇವೆ. ನಾವು ಎಲ್ಲಾ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !