Tuesday, January 13, 2026
Tuesday, January 13, 2026
spot_img

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ: ರಸ್ತೆಯಲ್ಲೇ ಪ್ರತಿಭಟನೆ ನಡೆಸಿದ ಅಯ್ಯಪ್ಪ ಭಕ್ತರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಯ್ಯಪ್ಪನ ಮಾಲೆ ಧರಿಸಿ ಮಕರ ಜ್ಯೋತಿ ನೋಡಲು ಶಬರಿಮಲೆಯತ್ತ ಹೊರಟ ಕರ್ನಾಟಕದ ಯಾತ್ರಿಗಳಿಗೆ ಕೇರಳದಲ್ಲಿ ನಿರ್ಬಂಧಿಸಲಾಗಿದೆ.

ಕರ್ನಾಟಕದ ಅಯ್ಯಪ್ಪ ಭಕ್ತ ವಾಹನಗಳನ್ನು ಶಬರಿಮಲೆಯಿಂದ 60 ಕಿಮೀ ದೂರದಲ್ಲೇ ಅಂದರೆ ಎರುಮಲೈಯಲ್ಲಿ ಕೇರಳ ಪೊಲಿಸರು ತಡೆಯುತ್ತಿದ್ದು, ವಾಹನಗಳನ್ನು ಇಲ್ಲೇ ನಿಲ್ಲಿಸಿ ಶಬರಿಮಲೆಗೆ ಕೇರಳ ಬಸ್​​ನಲ್ಲೇ ತೆರಳುವಂತೆ ತಾಕೀತು ಮಾಡಿದ್ದಾರೆ.

ಚಿಕ್ಕಮಗಳೂರು, ಬಾಗಲಕೋಟೆ, ಶಿವಮೊಗ್ಗ, ಸೇರಿದಂತೆ ವಿವಿಧ ಜಿಲ್ಲೆಯಿಂದ ತೆರಳಿದ ಅಯ್ಯಪ್ಪ ಮಾಲಾಧಾರಿಗಳು ಕಂಗಾಲಾಗಿದ್ದು, ಟಿಪಿ ಕಟ್ಟಿ ಬಂದರೂ ಸಹ ನಮ್ಮ ವಾಹನಗಳನ್ನು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಕೇರಳ ಪೊಲೀಸರ ವಿರುದ್ಧ ಅಯ್ಯಪ್ಪ ಭಕ್ತರು ರಸ್ತೆಯಲ್ಲೇ ಪ್ರತಿಭಟನೆ ನಡೆಸಿದ್ದು, ಕೇರಳ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಈಗಾಗಲೇ ವಾಹನ ಬಾಡಿಗೆ ಮಾಡಿಕೊಂಡು ಬಂದಿದ್ದೇವೆ. ಮತ್ತೆ ಕೇರಳ ಬಸ್ ಗಳಿಗೆ ಹಣ ಕೊಟ್ಟು ಹೋಗಬೇಕು ಅಂತಿದ್ದಾರೆ. ಇದು ಕೇರಳ ಸರಕಾರದಿಂದ ನಮ್ಮ ಮೇಲಾಗ್ತಿರುವ ದೌರ್ಜನ್ಯ. ಇದರಿಂದ ಕೂಡಲೇ ಸಿಎಂ ಸಿದ್ದರಾಮಯ್ಯನವರು ಕೇರಳ ಸರಕಾರದ‌ ಜೊತೆ ಮಾತಾಡಿ ನಮ್ಮ ವಾಹನ ಬಿಡಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.

Most Read

error: Content is protected !!