ಹೊಸದಿಗಂತ ಡಿಜಿಟಲ್ ಡೆಸ್ಕ್ :
ವೆಂಕಟೇಶ್ ಅಯ್ಯರ್ ಅರ್ಧಶತಕ ಹಾಗೂ ರಿಂಕು ಸಿಂಗ್ ಸ್ಪೋಟಕ ಬ್ಯಾಟಿಂಗ್ ಕೋಲ್ಕತಾ ನೈಟ್ ರೈಡರ್ಸ್ ತಂಡವು ಭರ್ಜರಿ ಗೆಲುವು ದಾಖಲಿಸಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ನೀಡಿದ್ದ 205 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ರೆಹಮನುಲ್ಲಾ ಗುರ್ಬಾಜ್ 15 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮನ್ದೀಪ್ ಸಿಂಗ್ ಬದಲಿಗೆ ಸ್ಥಾನ ಪಡೆದಿದ್ದ ಎನ್ ಜಗದೀಶನ್ವ ಬ್ಯಾಟಿಂಗ್ ಕೇವಲ 6 ರನ್‌ಗೆ ಸೀಮಿತವಾಯಿತು.
ಕೆಕೆಆರ್ ತಂಡಕ್ಕೆ ಮೂರನೇ ವಿಕೆಟ್‌ಗೆ ವೆಂಕಟೇಶ್ ಅಯ್ಯರ್ ಹಾಗೂ ನಾಯಕ ನಿತೀಶ್ ರಾಣಾ ಸ್ಪೋಟಕ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.
ನಾಯಕ ನಿತೀಶ್ ರಾಣಾ 29 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 45 ರನ್ ಬಾರಿಸಿ ಅಲ್ಜೆರಿ ಜೋಸೆಫ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ವೆಂಕಟೇಶ್ ಅಯ್ಯರ್, ಕೇವಲ 40 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 83 ರನ್ ಬಾರಿಸಿ ಅಲ್ಜೆರಿ ಜೋಸೆಫ್‌ಗೆ ವಿಕೆಟ್ ಒಪ್ಪಿಸಿದರು.
ಅಂತಿಮವಾಗಿ 17ನೇ ಓವರ್‌ನ ವೇಳೆಗೆ ಕೆಕೆಆರ್ ಗೆಲ್ಲಲು ಕೊನೆಯ 4 ಓವರ್‌ಗಳಲ್ಲಿ 50 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ದಾಳಿಗಿಳಿದ ರಶೀದ್ ಖಾನ್ ಮೊದಲ ಮೂರು ಎಸೆತಗಳಲ್ಲಿ ಆಂಡ್ರೆ ರಸೆಲ್, ಸುನಿಲ್ ನರೈನ್ ಹಾಗೂ ಶಾರ್ದೂಲ್ ಠಾಕೂರ್ ವಿಕೆಟ್ ಕಬಳಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಹ್ಯಾಟ್ರಿಕ್ ವಿಕೆಟ್ ಕಬಳಿಸಿ, ಪಂದ್ಯದ ದಿಕ್ಕನ್ನೇ ಬದಲಿಸುವಂತೆ ಮಾಡಿದರು. ಆದರೆ ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್, ಕೆಕೆಆರ್ ಪರ ಸತತ 5 ಸಿಕ್ಸರ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.