ಹೊಸದಿಗಂತ ಬೀದರ್:
ಹೊಸದಿಗಂತ ಪತ್ರಿಕೆಯ ವೆಂಕಟೇಶ ಮೊರಖಂಡಿಕರ್ ಅವರು ಜಿಲ್ಲಾ ರಾಜ್ಯೂತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಭಾರತವನ್ನು ಒಬ್ಬಂಟಿಯಾಗಿ ಸೈಕಲ್ ಸವಾರಿ ನಡೆಸಿದ ಸಾಧನೆ ಮಾಡಿರುವ ದೇಶದ ಏಕೈಕ ಪತ್ರಕರ್ತ ಬೀದರ್ ಜಿಲ್ಲೆಯ ಹಿರಿಯ ಪತ್ರಕರ್ತ ಹೊಸದಿಗಂತ ಜಿಲ್ಲಾ ವರದಿಗಾರರಾಗಿರುವ ವೆಂಕಟೇಶ ಮೊರಖಂಡಿಕರ್ ಅವರ ಪತ್ರಿಕಾ ರಂಗದಲ್ಲಿನ ವಿಶಿಷ್ಟ ಸಾಧನೆಯನ್ನು ಗುರುತಿಸಿ ಜಿಲ್ಲಾಡಳಿತದಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದೆ.
ಬೀದರ್ ನಗರದ ನೆಹರೂ ಮೈದಾನದಲ್ಲಿ ಧ್ವಜಾರೋಹಣದ ನಂತರ ರಾಜ್ಯ ಸರ್ಕಾರದಲ್ಲಿ ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಮ್ ಖಾನ್ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ, ಬೀದರ್ ಸಂಸದ ಸಾಗರ್ ಖಂಡ್ರೆ, ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದೀಲಿಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.