ಇಂದು ಅಯೋಧ್ಯೆಗೆ 50 ಲಕ್ಷ ಭಕ್ತರ ಆಗಮನ ನಿರೀಕ್ಷೆ: ವಿಶೇಷ ಭದ್ರತಾ ವ್ಯವಸ್ಥೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಮನ ಜನ್ಮಸ್ಥಳ ಎಂದು ಪರಿಗಣಿಸಲಾದ ಅಯೋಧ್ಯೆಯಲ್ಲಿ ಭಾನುವಾರ ಹೊಸ ವರ್ಷವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ, ಜನವರಿ 1ರ ಭಾನುವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಕೇಂದ್ರ ಸರ್ಕಾರದ ಅಂದಾಜಿನ ಪ್ರಕಾರ, ಭಾನುವಾರ ಸುಮಾರು 50 ಲಕ್ಷ ಜನರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಒಂದೇ ದಿನದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಅಧಿಕಾರಿಗಳು ಸಕಲ ವ್ಯವಸ್ಥೆ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಿ ಸಂಚಾರಕ್ಕೆ ತೊಂದರೆಯಾಗದಂತೆ ಕ್ರೇನ್‌ಗಳನ್ನು ಸಿದ್ಧಪಡಿಸಲಾಗಿದೆ. ಜನಸಂದಣಿ ನಿಯಂತ್ರಿಸಲು ಹಾಗೂ ಕಾಲ್ತುಳಿತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕಳೆದ ವರ್ಷ ಜನವರಿ 1ರಂದು 30 ಲಕ್ಷ ಭಕ್ತರು ಇಲ್ಲಿಗೆ ಬಂದಿದ್ದರು. ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಬರಲಿದೆ ಎಂದು ಅಂದಾಜಿಸಿದೆ. ಕಳೆದ ವರ್ಷ ಒಟ್ಟು 2.5 ಕೋಟಿ ಭಕ್ತರು ರಾಮಜನ್ಮ ಭೂಮಿಗೆ ಭೇಟಿ ನೀಡಿದ್ದರು. ಅವರಲ್ಲಿ 25,000 ವಿದೇಶಿಗರು. ಈ ವರ್ಷ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!