ಮಹಿಳೆಯರ ಮೇಲಿನ ಅಪರಾಧದ ತೀರ್ಪುಗಳು ಬೇಗ ಬರಬೇಕು: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಮಕ್ಕಳ ಸುರಕ್ಷತೆಯು ಸಮಾಜಕ್ಕೆ ಗಂಭೀರ ಕಾಳಜಿಯ ವಿಷಯವಾಗಿದ್ದು, ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೇಶಕ್ಕೆ ತ್ವರಿತ ತೀರ್ಪಿನ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸುಪ್ರೀಂ ಕೋರ್ಟ್‌ಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯಗಳು, ಮಕ್ಕಳ ಸುರಕ್ಷತೆ ಸಮಾಜದ ಗಂಭೀರ ವಿಷಯವಾಗಿದ್ದು ಅವರ ಸುರಕ್ಷತೆಗಾಗಿ ಹಲವು ಕಠಿಣ ಕಾನೂನುಗಳನ್ನು ಮಾಡಲಾಗಿದೆ. ಮಹಿಳೆಯರು ಕಾನೂನುಗಳ ಬಗ್ಗೆ ಅರಿಯುವ ಅಗತ್ಯವಿದೆ ಎಂದರು.

ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ 2019 ರಲ್ಲಿ ತ್ವರಿತ ನ್ಯಾಯಾಲಯಗಳ ಕಾನೂನನ್ನು ಅಂಗೀಕರಿಸಲಾಯಿತು. ಇಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳು ಪ್ರಮುಖ ಪಾತ್ರವಹಿಸುತ್ತವೆ. ನಾವು ಈ ಸಮಿತಿಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!