VVPAT ಮೂಲಕ EVMನಲ್ಲಿ ದಾಖಲಾದ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗುವ ಮತಗಳನ್ನು ವೆರಿಫೈಯಲ್ ಪೇಪರ್ ಆಡಿಟ್ ಟ್ರಯಲ್(ವಿವಿಪಿಎಟಿ) ಮೂಲಕ ಸಂಪೂರ್ಣ ಪರಿಶೀಲನೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ಅರ್ಜಿಗಳ ಕುರಿತಂತೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಆಲಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ನೇತೃತ್ವದ ವಿಭಾಗೀಯ ಪೀಠವು ತೀರ್ಪನ್ನು ಕಾಯ್ದಿರಿಸಿದೆ.

ವಿವಿಪ್ಯಾಟ್ ಯಂತ್ರಗಳಲ್ಲಿನ ಪಾರದರ್ಶಕ ಗಾಜನ್ನು ಬದಲಾಯಿಸಿ ಅಪಾರದರ್ಶಕ ಗಾಜು ಅಳವಡಿಸಿದ 2017ರ ಚುನಾವಣಾ ಆಯೋಗದ ನಿರ್ಧಾರವನ್ನು ರದ್ದುಗೊಳಿಸುವಂತೆಯೂ ಅರ್ಜಿದಾರರು ಕೋರಿದ್ದಾರೆ. ಬದಲಾದ ಗಾಜಿನ ಮೂಲಕ ಮತದಾರರು ಏಳು ಸೆಕೆಂಡುಗಳ ಕಾಲ ಲೈಟ್ ಆನ್ ಆಗಿರುವಾಗ ಮಾತ್ರ ಮತದಾನ ಮಾಡಿದ ಚೀಟಿಯನ್ನು ನೋಡಬಹುದಾಗಿದೆ.

ಚುನಾವಣಾ ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಮಣಿಂದರ್ ಸಿಂಗ್, ಇವಿಎಂ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ನ್ಯಾಯಾಲಯಕ್ಕೆ ವಿವರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!