ಪರೀಕ್ಷೆ ಕುರಿತು ವಿದ್ಯಾರ್ಥಿನಿ ರಚಿಸಿದ ಕವನವನ್ನು ಶ್ಲಾಘಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಡೆಹ್ರಾಡೂನ್‌ನ ಕೇಂದ್ರೀಯ ವಿದ್ಯಾಲಯ (ಕೆವಿ) ಒಎನ್‌ಜಿಸಿ ವಿದ್ಯಾರ್ಥಿನಿ ಕೆಎಂ ದಿಯಾ ಪರೀಕ್ಷೆಗಳ ಕುರಿತು ಬರೆದ ಕವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಕೇಂದ್ರೀಯ ವಿದ್ಯಾಲಯ ಸಂಘಟನೆಯ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ, “ತುಂಬಾ ಸೃಜನಶೀಲ! ಒತ್ತಡ ಮುಕ್ತ ಪರೀಕ್ಷೆಗಳು ಅತ್ಯುತ್ತಮ ಪರೀಕ್ಷೆಗಳಾಗಿವೆ. ಈ ತಿಂಗಳ 27 ರಂದು #ParikshaPeCharcha2023 ಸಮಯದಲ್ಲಿ ನಾವು ಇದನ್ನು ಚರ್ಚಿಸುತ್ತೇವೆ.” ಎಂದು ಕವನದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಮುಂಬರುವ ಜನವರಿ 27 ರಂದು ‘ಪರೀಕ್ಷಾ ಪರ್ ಚರ್ಚಾ’ 6 ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮವು ನವದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಪ್ರಕಾರ, ‘ಪರೀಕ್ಷಾ ಪೇ ಚರ್ಚಾ’ 2023 ರ ನೋಂದಣಿಗಳು 2022 ಕ್ಕೆ ಹೋಲಿಸಿದರೆ ಈ ವರ್ಷ ದ್ವಿಗುಣಗೊಂಡಿದೆ. ಸುಮಾರು 38.80 ಲಕ್ಷ ಭಾಗವಹಿಸುವವರು (31.24 ಲಕ್ಷ ವಿದ್ಯಾರ್ಥಿಗಳು, 5.60 ಲಕ್ಷ ಶಿಕ್ಷಕರು ಮತ್ತು 1.95 ಲಕ್ಷ ಪೋಷಕರು) ಎಂದು ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

MyGov ನಲ್ಲಿ ಸೃಜನಾತ್ಮಕ ಬರವಣಿಗೆ ಸ್ಪರ್ಧೆಗಳ ಮೂಲಕ ಆಯ್ಕೆಯಾದ ಸುಮಾರು 2,050ಮಂದಿಗೆ ಪ್ರಧಾನಿ ಮೋದಿ ಬರೆದಿರುವ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕದ ಇಂಗ್ಲಿಷ್ ಮತ್ತು ಹಿಂದಿ ಆವೃತ್ತಿಗಳನ್ನು ಒಳಗೊಂಡಿರುವ ವಿಶೇಷ ‘ಪರೀಕ್ಷಾ ಪೇ ಚರ್ಚಾ’ ಕಿಟ್ ಮತ್ತು ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಪರೀಕ್ಷೆಯ ಒತ್ತಡದಿಂದ ಹೊರಬರಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಈ ಕಾರ್ಯಕ್ರಮ ಪ್ರೇರಣೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!