Thursday, October 30, 2025

ಚಿನ್ನಸ್ವಾಮಿ ಕಾಲ್ತುಳಿತದಿಂದ ತುಂಬಾ ಡಿಸ್ಟರ್ಬ್, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟ ಘಟನೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿನ್ನಸ್ವಾಮಿ ಕಾಲ್ತುಳಿತದಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟಂತಹ ಘಟನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾವುಕರಾದರು.

ಮುಂಗಾರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರವಿಧಾನಸಭೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಪ್ರತಿಧ್ವನಿಸಿತು. ಈ ಬಗ್ಗೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸಿ, ಪ್ರಕರಣದಲ್ಲಿ ಸರ್ಕಾರದ ಪಾತ್ರ ಇಲ್ಲ, ಇದಕ್ಕೆ ಸರ್ಕಾರ ಕಾರಣ ಅಲ್ಲ, ಯಾರೂ ರಾಜೀನಾಮೆ ಕೊಡಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟನೆ ಕೊಟ್ಟರು.

ಇದೇ ವೇಳೆ ಆರ್.ಅಶೋಕ್ ಮಾತನಾಡಿ, ನಿಮಗೆ ಹೃದಯ, ಮನುಷ್ಯತ್ವ ಇದ್ದಿದ್ರೆ ಕ್ಷಮೆ ಕೇಳಬೇಕಿತ್ತು ಎಂದಿದ್ದಾರೆ.

ಸಿಎಂ ಮಾತನಾಡುತ್ತ, ನನಗೆ ಈ ಘಟನೆ ತುಂಬಾ ಡಿಸ್ಟರ್ಬ್ ಮಾಡಿದೆ. ಇಂಥ ದುರಂತ ಆಗಬಾರದಿತ್ತು, ಆಗಿಹೋಗಿದೆ. ನಾನು ಘಟನೆ ನಡೆದ ದಿನವೇ ವಿಷಾದ ವ್ಯಕ್ತಪಡಿಸಿದ್ದೆ. ನನ್ನ ರಾಜಕೀಯ ಜೀವನದಲ್ಲಿ ಇಂಥ ಕಹಿ ಘಟನೆ ಯಾವತ್ತೂ ಆಗಿರಲಿಲ್ಲ. ಕಾಲ್ತುಳಿತದಿಂದ 11 ಜನರ ಸಾವನ್ನು ನಾನು ನೋಡೇ ಇರಲಿಲ್ಲ. ದುರ್ಘಟನೆಗೆ ನಾನು ತುಂಬಾ ದು:ಖಪಟ್ಟಿದ್ದೇನೆ. ವಿಷಾದ ವ್ಯಕ್ತಪಡಿಸಿದ್ದೇನೆ. ಮನುಷ್ಯತ್ವ ಇರೋರಿಗೆ ದು:ಖ ಆಗೇ ಆಗುತ್ತೆ, ನನಗೂ ಆಗಿದೆ ಎಂದು ಭಾವುಕರಾಗಿ ನುಡಿದರು.

ಇನ್ನೂ ನಾವು ಪ್ರಕರಣದಲ್ಲಿ ಕ್ರಮ ತಗೊಂಡಿದ್ದೇವೆ, ಐವರು ಅಧಿಕಾರಿಗಳ ಅಮಾನತು ಮಾಡಿದ್ದೇವೆ. ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಅವರನ್ನು ಅರೆಸ್ಟ್ ಮಾಡಿಸಿದ್ದೀವಿ. ಮ್ಯಾಜಿಸ್ಟ್ರಿಯಲ್, ಕುನ್ಹಾ ನೇತೃತ್ವದಲ್ಲಿ ತನಿಖೆ ಮಾಡಿಸಿದ್ದೇವೆ. ಕಾಲ್ತುಳಿತ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ತಗೊಂಡಿದ್ದೀವಿ. ನ್ಯಾಯ ಕೊಡುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಿದ್ದೀವಿ. ನಾವು ಏನೆಲ್ಲ ಕ್ರಮ ತೆಗೊಳ್ಳಬೇಕೋ ಅದೆಲ್ಲವನ್ನು ಮಾಡಿದ್ದೇವೆ. ಹೈಕೋರ್ಟ್‌ನವರು ಕೂಡ ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಕೋರ್ಟ್ ಹೇಳಿದ ಕೂಡಲೇ ಜಾರ್ಜ್ಶೀಟ್ ಸಲ್ಲಿಕೆ ಮಾಡ್ತೀವಿ ಎಂದು ತಿಳಿಸಿದರು.

error: Content is protected !!