Monday, October 2, 2023

Latest Posts

ಮುಂದಿನ 24 ಗಂಟೆಗಳಲ್ಲಿ ಬಿಪರ್ಜೋಯ್ ಚಂಡಮಾರುತ ತೀವ್ರಗೊಳ್ಳಲಿದೆ: ಐಎಂಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂದಿನ 24 ಗಂಟೆಗಳಲ್ಲಿ ಬಿಪರ್ಜೋಯ್ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ.

ಬಿಪರ್ಜೋಯ್ ಚಂಡಮಾರುತ ಅರಬ್ಬಿ ಸಮುದ್ರದ ಕರಾವಳಿಯ ವಲ್ಸಾದ್‌ನ ತಿಥಾಲ್ ಬೀಚ್‌ನಲ್ಲಿ ಎತ್ತರದ ಅಲೆಗಳ ಬರುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ತಿಥಾಲ್ ಬೀಚ್ ಅನ್ನು ಜೂನ್ 14 ರವರೆಗೆ ಪ್ರವಾಸಿಗರಿಗೆ ಮುಚ್ಚಲಾಗಿದೆ.

“ನಾವು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹೇಳಿದ್ದೇವೆ ಮತ್ತು ಮೀನುಗಾರಿಕೆಗೆ ತೆರಳಿರುವವರು ಹಿಂತಿರುಗಿದ್ದಾರೆ. ಅಗತ್ಯವಿದ್ದರೆ ಸಮುದ್ರ ತೀರದಲ್ಲಿರುವ ಗ್ರಾಮದ ಜನರನ್ನು ಸುರಕ್ಷಿತ ಸ್ಥಳಾಂತರಿಸಲಾಗುವುದು” ಎಂದು ತಹಸೀಲ್ದಾರ್ ಟಿ.ಸಿ.ಪಟೇಲ್ ಹೇಳಿದ್ದಾರೆ.

ಮುಂದಿನ 36 ಗಂಟೆಗಳಲ್ಲಿ ಬಿಪರ್ಜೋಯ್ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸೂಚಿಸಿದೆ.

ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಶುಕ್ರವಾರ ಹಳದಿ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!