ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂದನವನದ ಹಿರಿಯ ನಟ ಅನಂತ್ ನಾಗ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರುತ್ತಿದ್ದಾರೆ.
ರಾಜ್ಯ ಘಟಕದ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಅವರು ಸಂಜೆ ಅನಂತ್ನಾಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಿದ್ದಾರೆ.
ಅನಂತ್ನಾಗ್ ಅವರಿಗೆ ರಾಜಕೀಯ ಪರಿಚಯ, ಅನುಭವ ಎರಡೂ ಇದೆ. ಈ ಹಿಂದೆ ಒಂದು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.