Wednesday, November 12, 2025

‘ತಿಥಿ’ ಸಿನಿಮಾ ಖ್ಯಾತಿಯ ಹಿರಿಯ ನಟ ಗಡ್ಡಪ್ಪ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.

ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು.

ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ, ತಿಂಗಳ ಹಿಂದೆ ಬಿದ್ದು ಸೊಂಟ ಪೆಟ್ಟಾಗಿ, ಆಪರೇಷನ್ ಆಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಲಿದೆ ಎಂದು ಮೃತರ ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ.

error: Content is protected !!