Thursday, July 7, 2022

Latest Posts

ಹಿರಿಯ ನಟಿ ಜಯಂತಿ ಇನ್ನಿಲ್ಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕನ್ನಡ ಚಿತ್ರರಂಗದ ಬಹುದೊಡ್ಡ ಕೊಂಡಿ ಕಳಚಿ ಬಿದ್ದಿದ್ದು, ಅಭಿನಯಶಾರದೆ, ಹಿರಿಯ ನಟಿ ಜಯಂತಿ (76) ವಿಧಿವಶರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಬನಶಂಕರಿಯ ತಮ್ಮ ನಿವಾಸದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ಜಯಂತಿ ಅವರ ಅಭಿನಯದಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಹಿರಿಯ ನಟಿ ಜಯಂತಿ ಅವರನ್ನು ಚಿತ್ರರಂಗ ಕಳೆದುಕೊಂಡಿದ್ದು, ಅಪಾರ ಅಭಿಮಾನಿಗಳು, ಸಿನಿಮಾ ತಾರೆಯರು ಕಣ್ಣೀರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss