Saturday, April 1, 2023

Latest Posts

ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್ ಹೃದಯಾಘಾತದಿಂದ ತಡರಾತ್ರಿ 1.45ರ ಸುಮಾರಿಗೆ ಕಾವಲ್‌ಭೈರಸಂದ್ರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಈ ಕುರಿತು ಮನ್​ದೀಪ್ ಪುತ್ರಿ ಅಕ್ಷತಾ ಮಾಹಿತಿ ನೀಡಿದ್ದಾರೆ.

ಮನ್​ದೀಪ್ ರಾಯ್ ಅವರಿಗೆ ಕಳೆದ ಡಿಸೆಂಬರ್​ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 75ರ ಮನ್‌ದೀಪ್‌ ರಾಯ್‌ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!