ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಮನ್ದೀಪ್ ಅವರಿಗೆ ಹೃದಯಾಘಾತದ ಸುದ್ದಿ ತಿಳಿಯುತ್ತಿದ್ದಂತೆ ಸಿನಿಗಣ್ಯರು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಆಪ್ತರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.