SHOCKING| ಶವವಾಗಿ ಪತ್ತೆಯಾದ ಹಿರಿಯ ನಟ ರವೀಂದ್ರ ಮಹಾಜನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮರಾಠಿ ಚಿತ್ರರಂಗದ ಹಿರಿಯ ನಟ ರವೀಂದ್ರ ಮಹಾಜನಿ ಅವರ ತಾಲೇಗಾಂವ್ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 77ವರ್ಷದ ಮಹಾಜನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಏಕೆಂದರೆ ಮನೆಯಿಂದ ದುರ್ವಾಸನೆ ಬರುತ್ತಿದ್ದ ಸಾವನ್ನಪ್ಪಿ ಮೂರು ದಿನಗಳಾಗಿರಬಹುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಕೂಡಲೇ ಪೋಲೀಸರ ತಂಡವೊಂದು ಅಪಾರ್ಟ್‌ಮೆಂಟ್‌ಗೆ ಆಗಮಿಸಿದ್ದು, ತಪಾಸಣ ನಡೆಸಿದಾಗ ಒಳಗೆ ಮಹಾಜನಿಯ ಶವವಾಗಿ ಪತ್ತೆಯಾಗಿದ್ದಾರೆ.

ಸಾವಿಗೆ ಕಾರಣವನ್ನು ಖಚಿತಪಡಿಸಲು ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ತನಿಖೆ ಇನ್ನೂ ನಡೆಯುತ್ತಿದೆ.

ಮಹಾಜನಿ ‘ಮುಂಬೈ ಚಾ ಫೌಜ್ದರ್’, ‘ಝೂಂಜ್’, ‘ಕಲತ್ ನಕಲತ್’ ಮುಂತಾದ ಹಲವಾರು ಮರಾಠಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಅವರು ಅಶುತೋಷ್ ಗೋವಾರಿಕರ್ ಅವರ ‘ಪಾಣಿಪತ್’ (2019) ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!