ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಮತ್ತೆ ಏರುಪೇರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ನಟ ಶರತ್ ಬಾಬು (Sharat Babu) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ಅಂತ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್ (Hyderabad) ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ .

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಮತ್ತಷ್ಟು ಹದಗೆಟ್ಟ ಪರಿಣಾಮ ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ಅಮೃತವರ್ಷಿಣಿ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!