ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾಗಿದೆ. ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್ ಪುತ್ರ ರೋಹಿತ್ ಮಾಹಿತಿ ಹಂಚಿಕೊಂಡಿದ್ದಾರೆ.