Tuesday, November 11, 2025

ಆಸ್ಪತ್ರೆಯಲ್ಲಿ ಹಿರಿಯ ನಟ ಉಮೇಶ್: ವೈದ್ಯರು ಪರೀಕ್ಷೆ ವೇಳೆ ಶಾಕಿಂಗ್ ವಿಚಾರ ರಿವೀಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಕಾಲು ಜಾರಿ ಬಿದ್ದ ಕಾರಣ, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದೀಗ ಪರೀಕ್ಷೆ ಮಾಡುವ ವೇಳೆ ಒಂದು ಶಾಕಿಂಗ್ ವಿಚಾರ ರಿವೀಲ್ ಆಗಿದೆ. ಅವರಿಗೆ ಲಿವರ್ ಕ್ಯಾನ್ಸರ್ ಇರುವ ವಿಚಾರ ಗೊತ್ತಾಗಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ರೋಗವನ್ನು ಖಚಿತಪಡಿಸಿಕೊಳ್ಳಲು ಮತ್ತಷ್ಟು ಪರೀಕ್ಷೆಯ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಜಾರಿ ಬಿದ್ದ ವೇಳೆ ಉಮೇಶ್ ಅವರ ಮೂಳೆಗೆ ಏಟಾಗಿತ್ತು. ಇಂದು (ಅಕ್ಟೋಬರ್ 11) ಸರ್ಜರಿ ಮಾಡುವ ಪ್ಲ್ಯಾನ್ ಇತ್ತು. ಈ ವೇಳೆ ಲಿವರ್​ನಲ್ಲಿ ಹಾನಿ ಉಂಟುಮಾಡುವ ಗಡ್ಡೆ ಇರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ವೈದ್ಯರು ಅವರ ಕುಟುಂಬದ ಜೊತೆ ಚರ್ಚೆ ಮಾಡಿದ್ದಾರೆ.

ಸದ್ಯ ವೈದ್ಯರ ಪರೀಕ್ಷೆ ಪ್ರಕಾರ, ಲಿವರ್​ನಲ್ಲಿ ಕ್ಯಾನ್ಸರ್ ಉಂಟಾಗಿದ್ದು, ಅದು ಬೇರೆ ಅಂಗಗಳಿಗೆ ಸ್ಪ್ರೆಡ್ ಆಗಿದೆ. ಉಮೇಶ್ ಅವರು ನೋಡಲು ಆರೋಗ್ಯವಾಗಿಯೇ ಕಾಣಿಸಿದ್ದಾರೆ. ಆದರೆ, ಕ್ಯಾನ್ಸರ್ ಇದೆ. ಇದನ್ನು ಖಚಿತಪಡಿಸಲು ಕೆಲವು ಟೆಸ್ಟ್ ಮಾಡಬೇಕಿದೆ. ಲಿವರ್ ಒಳಗೆ ಇರೋ ಗಡ್ಡೆಯನ್ನು ತೆಗೆದು ಪರೀಕ್ಷೆಗೆ ಕಳುಹಿಸಬೇಕಿದೆ ಎಂದು ವೈದ್ಯರು ಹೇಳಿದ್ದಾರೆ.

ಇಂಜೆಕ್ಷನ್ ಅಲ್ಲಿ ಗಡ್ಡೆ ಕರಗಿಸೋ ಪ್ರಯತ್ನ ನಡೆಯುತ್ತಿದೆ. ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದೆ. ರಿಕವರಿ ಆಗುವ ಚಾನ್ಸ್ ಇದೆ’ ಎಂದು ವೈದ್ಯರು ಹೇಳಿದ್ದಾರೆ.

ಸದ್ಯ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆಯಿಂದ ಬಂದ ಮಾಹಿತಿಗಳನ್ನು ಇಟ್ಟುಕೊಂಡು ಉಮೇಶ್​ಗೆ ಕ್ಯಾನ್ಸರ್ ಇದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಸಂಪೂರ್ಣ ಪರೀಕ್ಷೆ ಬಳಿಕ ಅಸಲಿ ವಿಚಾರ ಏನು ಎಂಬ ವಿಚಾರ ರಿವೀಲ್ ಆಗಲಿದೆ.

error: Content is protected !!