ಕನ್ನಡ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ, ತೆಲುಗು ಹಾಗೂ ಇನ್ನಿತರ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಜಮುನಾ ಅವರು ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1953 ರಲ್ಲಿ ಸಿನಿ ರಂಗಕ್ಕೆ ಕಾಲಿಟ್ಟ ಅವರು ಅಪಾರ ಅಭಿಮಾನಿಗಳನ್ನು ಗಳಿಸಿದ್ದರು.

ಬೆಳಗ್ಗೆ 11 ಗಂಟೆಗೆ ಜಮುನಾ ಅವರ ಮೃತದೇಹವನ್ನು ಹೈದರಾಬಾದ್‌ನ ಫಿಲಂ ಚೇಂಬರ್‌ಗೆ ತರಲಾಗುತ್ತದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕನ್ನಡದಲ್ಲಿ ಎಂಟು ಚಿತ್ರಗಳಲ್ಲಿ ಜಮುನಾ ನಟಿಸಿದ್ದರು, ತೆನಾಲಿ ರಾಮಕೃಷ್ಣ, ಭೂಕೈಲಾಸ ಸಿನಿಮಾಗಳಲ್ಲಿ ಅವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!