ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಹಿರಿಯ ನಟಿ ಜಯಂತಿ ಅವರ ನಿಧನಕ್ಕೆ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಕಂಬನಿ ಮಿಡಿದಿದ್ದಾರೆ.
‘ಜಯಂತಿ ಅಮ್ಮಾವ್ರು ಭಾರತೀಯ ಚಿತ್ರರಂಗದಲ್ಲಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಮ್ಮ ತಂದೆಯವರ ಜೊತೆ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರವಾದಂಥವರು. ನಮ್ಮ ಮನೆಯ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಅಪ್ಪಾಜಿ ಕಾಡಿಗೆ ಹೋಗಿದ್ದಂತಹ ಸಂದರ್ಭದಲ್ಲಿ ನಿತ್ಯ ಕರೆ ಮಾಡಿ ನಮ್ಮ ಕುಟುಂಬದ ಯೋಗಕ್ಷೇಮ ವಿಚಾರಿಸುತ್ತಿದ್ದರು. ನಮಗೆ ಒಳ್ಳೆಯದಾಗಲಿ ಅಂತ ಪೂಜೆಗಳನ್ನ ಮಾಡಿಸುತ್ತಿದ್ದರು’ ಎಂದು ಪುನೀತ್ ರಾಜ್ ಕುಮಾರ್ ಪತ್ರ ಮೂಲಕ ಕಂಬಿ ಮಿಡಿದಿದ್ದಾರೆ.
‘ಅವರ ಜೊತೆ ನಾನು ‘ರಾಜ್’ ಸಿನಿಮಾದಲ್ಲಿ ಅಭಿನಯಿಸಿದ್ದು ನನ್ನ ಭಾಗ್ಯ. ಇವತ್ತು ಅವರನ್ನು ಕಳೆದುಕೊಂಡಿರುವುದು ನನಗೆ ಮತ್ತು ನಮ್ಮ ಕುಟುಂಬಕ್ಕೆ ತುಂಬಾ ನೋವುಂಟು ಮಾಡಿದೆ. ಅವರ ನೆನಪುಗಳು ನಮ್ಮೊಳಗೆ ಸದಾ ಜೀವಂತ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸೋಣ. ಓಂ ಶಾಂತಿ ಎಂದು ಪುನೀತ್ ರಾಜ್ಕುಮಾರ್ ಬರೆದುಕೊಂಡಿದ್ದಾರೆ.
— Puneeth Rajkumar (@PuneethRajkumar) July 26, 2021
‘ಅಭಿನಯ ಶಾರದೆ ಜಯಂತಿ ಅಮ್ಮ ಅವರು ವಿಧಿವಶರಾಗಿದ್ದಾರೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾದದ್ದು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ರಾಘವೇಂದ್ರ ರಾಜ್ಕುಮಾರ್ ಹೇಳಿದ್ದಾರೆ.