ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕನ್ನಡ ಹೆಮ್ಮೆಯ ಹಿರಿಯ ನಟಿ ಜಯಂತಿ ಅವರು ಇಂದು ವಿಧಿವಶರಾಗಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ಐದು ಗಂಟೆಗೆ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಬನಶಂಕರಿ ಚಿತಾಗಾರದಲ್ಲಿ ಪೊಲೀಸ್ ಗೌರವದೊಂದಿಗೆ ಜಯಂತಿ ಅಂತ್ಯಕ್ರಿಯೆ ನೆರವೇರಿದೆ. ಪುತ್ರ ಕೃಷ್ಣಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಜಯಂತಿ ಕುಟುಂಬದವರು, ಅಭಿಮಾನಿಗಳು, ಚಿತ್ರರಂಗದ ಕೆಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ಎರಡು ಕಣ್ಣುಗಳು ದಾನ
ಅವರು ತಮ್ಮ ಎರಡು ಕಣ್ಣುಗಳನ್ನು ನಾರಾಯಣ ನೇತ್ರಾಲಯದ ಡಾ ರಾಜ್ ಕುಮಾರ್ ಐ ಬ್ಯಾಂಕ್ ಗೆ ನೀಡಲಾಗಿದೆ.
ಇನ್ನು ಅವರ ಕಣ್ಣುಗಳನ್ನು ಬಾಲಕನೊಬ್ಬನಿಗೆ ನೀಡಲಾಗಿದೆ ಎನ್ನಲಾಗಿದೆ. ಈ ಮೂಲಕ ಸಾವಿನಲ್ಲೂ ಕೂಡ ಅವರು ಮಾನವೀಯತೆಯನ್ನು ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.