ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ (Passed away).
ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ.
87 ವರ್ಷದ ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ (Health) ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ (Cm Siddaramiah) ಸಹಿತ ಗಣ್ಯರು ಮನೆಗೆ ಭೇಟಿ ನೀಡಿದ್ದರು.
ಲೀಲಾವತಿ ಅವರು ನೆಲಮಂಗಲದ ಸೋಲದೇವನಹಳ್ಳಿ ಬಳಿ ಪುತ್ರ ವಿನೋದ್ ರಾಜ್ ಜೊತೆ ವಾಸವಾಗಿದ್ದರು. ಸಿನಿಮಾದಿಂದ ದೂರ ಉಳಿದುಕೊಂಡಿದ್ದ ಅವರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ವಿನೋದ್ ರಾಜ್ ಕೂಡ ಕೃಷಿ ಕೆಲಸ ಮಾಡುತ್ತಿದ್ದಾರೆ. ಲೀಲಾವತಿ ಅವರ ಅನಾರೋಗ್ಯದ ವಿಷಯ ತಿಳಿದ ಬಳಿಕ ಕನ್ನಡ ಚಿತ್ರರಂಗದ ಅನೇಕರು ಸೋಲದೇವನಹಳ್ಳಿಗೆ ಬಂದು ಆರೋಗ್ಯ ವಿಚಾರಿಸಿದ್ದರು.