ಹಿರಿಯ ನಟಿ ತಾರಾ ಅನುರಾಧ ಅವರಿಗೆ ಮಾತೃವಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಹಿರಿಯ ನಟಿ ತಾರಾ ಅವರ ತಾಯಿ ಪುಷ್ಪಾ (76) ಇಂದು ಚಿಕಿತ್ಸೆ ಫಲಕಾರಿಯಾದೇ ವಿಧಿವಶರಾಗಿದ್ದಾರೆ.
ಮೈಸೂರಿಗೆ ಇಬ್ಬರೂ ಶೂಟಿಂಗ್​ಗಾಗಿ ಹೋಗಿದ್ದರು. ಈ ಸಂದರ್ಭದಲ್ಲಿ ಪುಷ್ಪ ಅಸ್ವಸ್ಥರಾಗಿದ್ದು ವಾಂತಿಯಾಗಿದೆ. ತಕ್ಷಣ ಮೈಸೂರು ಜೆಎಸ್​​ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಂಜೆ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಮೈಸೂರಿನಿಂದ ಪಾರ್ಥಿವ ಶರೀರವನ್ನು ಬೆಂಗಳೂರಿನ ಜೆ.ಪಿ.ನಗರದ ನಿವಾಸಕ್ಕೆ ತರುವ ವ್ಯವಸ್ಥೆ ಮಾಡಲಾಗಿದೆ ಎಂದು ಅಳಿಯ ವೇಣು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!